ಪ್ರಗತಿವಾಹಿನಿ ಸುದ್ದಿ: ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಇಲ್ಲಿನ ಹೊಸನಗರ ತಾಲೂಕಿನ ಮತ್ತಿಕೈ ಗ್ರಾಮದ ಚಂಪಕಾಪುರದಲ್ಲಿ ಈ ದುರಂತ ಸಂಭವಿಸಿದೆ. ರಾಜೇಶ್ ಎಂಬುವವರ ಪತ್ನಿ ವಾಣಿ ತನ್ನ ಇಬ್ಬರು ಗಂಡು ಮಕ್ಕಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ವಾಣಿ (32) ಮಕ್ಕಳಾದ ಸಮರ್ಥ (12) ಹಾಗೂ ಸಂಪದ (6) ಮೃತ ದುರ್ದೈವಿಗಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೊಸನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ