ಪ್ರಗತಿವಾಹಿನಿ ಸುದ್ದಿ, ಬೆಳಗಾವಿ– ಜಿಲ್ಲೆಯ ಮೂರು ಮತಕ್ಷೇತ್ರಗಳ ಉಪ ಚುನಾವಣೆಗೆ ಸೋಮವಾರ(ಸೆ.23)ದಿಂದ ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಗೋಕಾಕ ಮತಕ್ಷೇತ್ರದ ನಾಮಪತ್ರಗಳನ್ನು ಗೋಕಾಕ ತಹಶೀಲ್ದಾರ ಕಚೇರಿಯಲ್ಲಿ; ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ನಾಮಪತ್ರಗಳನ್ನು ಅಥಣಿ ತಹಶೀಲ್ದಾರ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸ್ವೀಕರಿಸಲಾಗುವುದು.
ಚುನಾವಣಾಧಿಕಾರಿಗಳ ನೇಮಕ:
ಮೂರು ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳನ್ನು ಕೂಡ ನೇಮಿಸಲಾಗಿದೆ.
ಗೋಕಾಕ ಮತಕ್ಷೇತ್ರಕ್ಕೆ ಐ.ಎ.ಎಸ್. ಅಧಿಕಾರಿ ಬೂಬಾಲನ್ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ಅಥಣಿ ಮತಕ್ಷೇತ್ರಕ್ಕೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಿಲಾನಿ ಮೊಖಾಶಿ ಮತ್ತು ಕಾಗವಾಡ ಕ್ಷೇತ್ರದ ಚುನಾವಣಾಧಿಕಾರಿಯಾಗಿ ಪರಿಸರ ಅಧಿಕಾರಿ ಗೋಪಾಲಕೃಷ್ಣ ಅವರು ಕಾರ್ಯನಿರ್ವಹಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ