ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ಮತ್ತೆ ಭೂ ಕುಸಿತ ಅವಘಡಗಳು ಸಂಭವಿಸುತ್ತಿವೆ. ರೈಲ್ವೆ ಹಳಿಗಳ ಮೇಲೆಯೇ ಗುಡ್ಡ ಕುಸಿತಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ-ಬಾಳ್ಳುಪೇಟೆ ಬಳಿ ನಡೆದಿದೆ.
ಹಾಸನ-ಮಂಗಳೂರು ನಡುವಿನ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆಯೂ ಭೂ ಕುಸಿತ ಸಂಭವಿಸಿದೆ. ಇದರಿಂದಾಗಿ ಈ ಭಾಗದ ರೈಲು ಸಂಚಾರಗಳು ಬಂದ್ ಆಗಿವೆ.
ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿತದಿಂದಾಗಿ ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳುರು, ಮುರುಡೇಶ್ವರ ರೈಲು ಸಂಚಾರ ತಾತ್ಕಾಲಿಕ ರದ್ದಾಗಿದೆ. ರೈಲ್ವೆ ಇಲಾಖೆ ಕಾರ್ಮಿಕರು ರೈಲು ಹಳಿಗಳ ಮೇಲಿನ ಮಣ್ಣು ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.
ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು, ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಹಾಗೂ ಹಾಸನ-ಮಂಗಳೂರು ನಡುವೆ ರೈಲು ಸಂಚಾರ ತಾತ್ಕಾಲಿಕ ರದ್ದಾಗಿದೆ. ಇದೇ ವೇಳೆ ಆಲೂರು-ಹಾಸನ ನಡುವಿನ ರೈಲು ಸಂಚಾರವೂ ಸ್ಥಗಿತಗೊಂಡಿದೆ. ದಿಢೀರ್ ರೈಲು ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಟ ನಡೆಸುವಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ