
ಪ್ರಗತಿವಾಹಿನಿ ಸುದ್ದಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಜೈಪುರ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ನವೀನ್ (28) ಹಾಗೂ ಶೇಷಾದ್ರಿ (47) ಮೃತ ದುರ್ದೈವಿಗಳು.
ಸಚಿನ್ ಎಂಬಾತನ ಸ್ಥಿತಿ ಚಿಂತಾಜನಕವಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.