Karnataka NewsLatest

*ವಿದ್ಯುತ್ ತಂತಿ ತಗುಲಿ ದಂಪತಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ತಂತಿ ತಗುಲಿ ಪತಿ ಹಾಗೂ ಪತ್ನಿ ಇಬ್ಬರೂ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಕಾಟಿಹಳ್ಳ ಗ್ರಾಮದಲ್ಲಿ ನಡೆದಿದೆ.

ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ನಾಗರಾಜ್ ಹಾಗೂ ಪತ್ನಿ ಲತಾ ಮೃತ ದಂಪತಿ. ಟಿಸಿ ಸಂಪರ್ಕಿಸುವ ತಂತಿ ತೋಟದಲ್ಲಿ ತುಂಡಾಗಿ ಬಿದ್ದಿತ್ತು. ಗೊತ್ತಾಗದೇ ತಂತಿಯ ಮೇಲೆ ಕಾಲಿಟ್ಟಿದ್ದಾರೆ. ಒಬ್ಬರನ್ನು ರಕ್ಷಿಸಲು ಹೋಗಿ ಇನ್ನೊಬ್ಬರು ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button