ಪ್ರಗತಿವಾಹಿನಿ ಸುದ್ದಿ: ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತೆಯಲ್ಲಿ ವೈದ್ಯಯ ಮೇಲೆ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ದೇಶಾದ್ಯಂತ ವೈದ್ಯರು ಹಾಗೂ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಕರ್ನಾಟಕದಲ್ಲಿಯೂ ಪ್ರತಿಭಟನೆ ನಡೆಯುತ್ತಿದೆ. ವೈದ್ಯಯ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ ಖಂದಿಸಿ ಹಾಗೂ ವೈದ್ಯರಿಗೆ ಸೂಕ್ತ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ ನಡೆಯುತ್ತಿದ್ದು, ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಮುಂಜಾನೆ 6 ಗಂಟೆಯಿಂದ ಆರಂಭವಾಗಿರುವ ಮುಷ್ಕರ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಇದರಿಂದಾಗಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆ ಸಂಪೂರ್ಣ ವ್ಯತ್ಯವಾಗಿದೆ.
ವೈದ್ಯರ ಮುಷ್ಕರ ಹಿನ್ನೆಲೆಯಲ್ಲಿ ಯಾವೆಲ್ಲ ಸೇವೆಗಳು ಲಭ್ಯವಿರಲಿದೆ ಯಾವೆಲ್ಲ ಸೇವೆ ಅಲಭ್ಯ ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
ಯಾವ ಸೇವೆ ಇರುತ್ತೆ?
ಎಮರ್ಜನ್ಸಿ ಸೇವೆ
ಮೆಡಿಕಲ್ ಶಾಪ್ಸ್
ಇನ್ ಪೇಷಂಟ್ ಸೇವೆ
ಹೆರಿಗೆ, ಎಮರ್ಜನ್ಸಿ ಸರ್ಜರಿ
ಯಾವ ಸೇವೆ ಇರಲ್ಲ?
ಓಪಿಡಿ
ಡಯಾಲಿಸಿಸ್
ಕ್ಲಿನಿಕ್ ಸೇವೆ
ಮಕ್ಕಳ ಓಪಿಡಿ
ಡೆಂಟಲ್ ಸರ್ವಿಸ್
ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ವೈದ್ಯಕೀಯ ಸೇವೆ ದೊರೆಯಲಿದೆ. ಆದರೆ ವೈದ್ಯರು ಕಪ್ಪುಪಟ್ಟಿ ಧರಿಸಿ ಸೇವೆ ನೀಡಲಿದ್ದಾರೆ. ಮತ್ತೊಂದೆಡೆ ಖಾಸಗಿ ವೈದ್ಯರು ಭಾರತೀಯ ವೈದ್ಯಕೀಯ ಸಂಘದ (IMA) ಕಚೇರಿ ಎದುರು ಹೋರಾಟಕ್ಕೆ ಸಜ್ಜಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ