Kannada NewsKarnataka NewsLatest

ಸಂಜೆ 5 ಗಂಟೆಗೆ ವಿಶೇಷ ಸಚಿವಸಂಪುಟ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಗೆ ತುರ್ತಾಗಿ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ.

ವಿಧಾನಸೌಧದ ಸಚಿವಸಂಪುಟ ಸಭಾಭವನದಲ್ಲಿ ಈ ಸಭೆ ನಡೆಯಲಿದೆ. ಸರಕಾರದ ಮುಂದಿನ ನಡೆ ಕುರಿತು ಈ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವ ಸಾಧ್ಯತೆ ಇದೆ.

ಈ ಮಧ್ಯೆಮುಖ್ಯಮಂತ್ರಿಗಳು ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಬೆಳಗ್ಗೆಯಿಂದಲೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಚರ್ಚೆ ನಡೆಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button