Karnataka NewsLatest

*ಭಾರಿ ಮಳೆ ಎಚ್ಚರಿಕೆ: 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗುತ್ತಿದೆ. ರಾಜ್ಯದ 19 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಮತ್ತೆ ಚುರುಕಾಗಿದ್ದು, ರಾಜ್ಯದಲ್ಲಿ ಮತ್ತೆ ಮಳೆ ಜೋರಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

Home add -Advt

ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ಶಿವಮೊಗ್ಗ, ಚಿತ್ರದುರ್ಗ, ರಾಮನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉಳಿದ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.


Related Articles

Back to top button