ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರು ಹೊರವಲಯದಲ್ಲಿ ನಡೆದಿದೆ.
ಅಪಘಾತದಲ್ಲಿ ಹಾವೇರಿ ಮೂಲದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರುದ್ರಪ್ಪ ಅಂಗಡಿ (55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16) ಹಾಗೂ ಮಗ ವಿಜಯ್ (12) ಮೃತ ದುರ್ದೈವಿಗಳು.
ಕುಟುಂಬದವರು ಕಾರಿನಲ್ಲಿ ಕಲ್ಲಾಪುರ ಬಸವೇಶ್ವರ ದೇವಸ್ಥಾನಕ್ಕೆ ತೆರಳುವಾಗ ಬಾಗಲಕೋಟೆ ಜಿಲ್ಲೆ ಇಳಕಲ್ ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಬಸ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ