Karnataka News

*ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ*

ಪ್ರಗತಿವಾಹಿನಿ ಸುದ್ದಿ: ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಲೆ ಕಾಮುಕರು ಅಟ್ಟಹಾಸ ಮೆರೆದಿದ್ದು, ಸಾಮೂಹಿಕ ಅತ್ಯಾಚಾರವೆಸಗಿರುವ ಘೋರ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಕೋಲ್ಕತ್ತಾದ ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆ ಮೇಲೆ ಅತ್ಯಾಚಾರ, ಹತ್ಯೆ ಪ್ರಕರಣ ಖಂಡಿಸಿ ದೇಶಾದ್ಯಂತ ಪ್ರತಿಭಟನೆ, ಆಕ್ರೋಶ ವ್ಯಕ್ತವಾಗುತ್ತಿರುವ ಸಂದರ್ಭದಲ್ಲೇ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಯುವತಿ ಮೇಲೆ ಆಟೋದಲ್ಲಿ ಗ್ಯಾಂಗ್ ರೇಪ್ ನಡೆಸಲಾಗಿದ್ದು, ಬೆಂಗಳೂರು ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬ ಆತಂಕ ಎದುರಾಗುತ್ತಿದೆ.

ಆಟೋದಲ್ಲಿ ಮನೆಗೆ ಹೋಗುತ್ತಿದ್ದ ಯುವತಿಯ ಮೇಲೆ ಹೆಚ್.ಎಸ್.ಆರ್ ಲೇಔಟ್ ಬಳಿ ಕಾಮುಕರ ಗುಂಪು ಗ್ಯಾಂಗ್ ರೇಪ್ ನಡೆಸಿದೆ. ಯುವತಿಯನ್ನು ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿ ಪ್ರಕಾರ ಯುವತಿ ಕೋರಮಂಗಲದ ಬಳಿಯ ಪಬ್ ಹೋಗಿ ಬೈಕ್ ನಲ್ಲಿ ಮನೆಗೆ ವಾಪಾಸ್ ಆಗಿತ್ತಿದ್ದಳು. ಈ ವೇಳೆ ಬೈಕ್ ಅಪಘಾತಕ್ಕೀಡಾಗಿದೆ. ಬೈಕ್ ಬಿಟ್ಟು ಯುವತಿ ಆಟೋ ಹತ್ತಿ ಮನೆಗೆ ಹೋಗುತ್ತಿದ್ದಳು. ಈ ವೇಳೆ ಹೆಚ್.ಎಸ್.ಆರ್.ಲೇಔಟ್ ಬಳಿ ಕಾಮುಕರ ಗುಂಪು ಯುವತಿ ಮೇಲೆ ಅತ್ಯಾಚಾರ ನಡೆಸಿದೆ. ಹೆಚ್.ಎಸ್.ಆರ್.ಲೇಔಟ್ ಠಾಣೆ ವಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button