Kannada NewsKarnataka NewsNationalPolitics

*ಕೇಂದ್ರ ಸಚಿವರ ಪತ್ನಿ ಡೆಂಗ್ಯೂ ಜ್ವರಕ್ಕೆ ಬಲಿ*

ಪ್ರಗತಿವಾಹಿನಿ‌ ಸುದ್ದಿ : ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಜುಯಲ್ ಓರಮ್ ಅವರ ಪತ್ನಿ ಜಿಂಗಿಯಾ ಓರಮ್ ಅವರು ಡೆಂಗ್ಯೂ ಜ್ವರದಿಂದ ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಜಿಂಗಿಯಾ ಓರಮ್ (58) ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಶನಿವಾರ ರಾತ್ರಿ 10:50 ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ಭಾನುವಾರ ತಿಳಿಸಿವೆ.

ಜಿಂಗಿಯಾ ಓರಮ್ ಅವರು ಪತಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಓರಮ್ ಅಂತ್ಯಕ್ರಿಯೆಯು ಸುಂದರ್‌ಗಡ್ ಜಿಲ್ಲೆಯ ಅವರ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೇಂದ್ರ ಸಚಿವರೂ ಡೆಂಗ್ಯೂಗೆ ತುತ್ತಾಗಿದ್ದು, ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜುಯಲ್ 1987 ರ ಮಾರ್ಚ್ 8 ರಂದು ಜಿಂಗಿಯಾ ಅವರನ್ನು ವಿವಾಹವಾದರು.

ಸದ್ಯ ಓರಮ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ಜುಯಲ್ ಅವರ ಸುದೀರ್ಘ ರಾಜಕೀಯ ಪಯಣದಲ್ಲಿ ಜಿಂಗಿಯಾ ಓರಮ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button