Karnataka NewsLatest

*ರಾಜ್ಯಪಾಲರ ವಿರುದ್ಧ ತೀವ್ರಗೊಂಡ ಕಾಂಗ್ರೆಸ್ ಪ್ರತಿಭಟನೆ; ಬಸ್ ಗಳ ಮೇಲೆ ಕಲ್ಲು ತೂರಾಟ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭನೆ ನಡೆಸುತ್ತಿದ್ದು, ತೀವ್ರ ಸ್ವರೂಪ ಪಡೆದಿದೆ.

ರಾಜ್ಯದ ಜಿಲ್ಲಾ, ತಾಲೂಕು ಕೇಂದ್ರಗಳಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯಪಾಲರ ನಡೆಯನ್ನು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ಮಂಗಳೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

Home add -Advt

ಖಾಸಗಿ ಬಸ್ ನ ಗಾಜು ಪುಡಿ ಪುಡಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಕಲ್ಲು ತೂರಾಟ ನಡೆಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Related Articles

Back to top button