ಪ್ರಗತಿವಾಹಿನಿ ಸುದ್ದಿ, ರಾಮದುರ್ಗ – ಇಲ್ಲಿನ ನಾರಾಯಣ ಪೇಟೆಯ ನಿವಾಸಿ ನೇಕಾರ ನಾರಾಯಣ ಕೇಶಪ್ಪ ಜವಳಿ ( 47) ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ.
ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ಮನೆಯ ಮಣ್ಣಿನ ಮೇಲ್ಛಾವಣಿ ಕಸಕಡ್ಡಿಗಳಿಂದ ತುಂಬಿತ್ತು. ಅದನ್ನು ಸ್ವಚ್ಚಗೊಳಿಸಲು ಮನೆಯ ಮೇಲೆ ಇಂದು ಮುಂಜಾನೆ ತೆರಳಿದ್ದ ಸಂದರ್ಭದಲ್ಲಿ ವಿದ್ಯುತ್ ಲೈನ್ ತಗಡಿಗೆ ಪಸರಿಸಿ ನಾರಾಯಣ ಮೃತಪಟ್ಟಿದ್ದಾರೆ.
ಇದನ್ನೂ ಓದಿ – ಪ್ರವಾಹದಿಂದ ಹಾನಿ -ನೇಕಾರ ಆತ್ಮಹತ್ಯೆ
ಮೃತರಿಗೆ ತಂದೆ, ತಾಯಿ, ಪತ್ನಿ, ಪುತ್ರಿ ಹಾಗೂ ಓರ್ವ ಪುತ್ರ ಇದ್ದಾರೆ. ಮೃತರ ಸಂಬಂಧಿಕರ ರೋಧನ ಮುಗಿಲು ಮುಟ್ಟಿತ್ತು. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕ, ಮಾಜಿ ಶಾಸಕ ಭೇಟಿ:
ವಿದ್ಯುತ್ ಅವಘಡದಿಂದ ಮೃತಪಟ್ಟ ನಾರಾಯಣ ಜವಳಿ ಅವರ ನಿವಾಸಕ್ಕೆ ಶಾಸಕ ಮಹಾದೇವಪ್ಪ ಯಾದವಾಡ ಹಾಗೂ ಮಾಜಿ ಶಾಸಕ ಅಶೋಕ್ ಪಟ್ಟಣ ಭೇಟಿ ನೀಡಿ ಸಾಂತ್ವನ ಹೇಳಿದರು. ಮೃತರ ಕುಟುಂಬಕ್ಕೆ ಎಲ್ಲ ನೆರವು ಒದಗಿಸಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಬಸ್ ಹತ್ತಿಸಲು ಯತ್ನಿಸಿದ್ದ ಬಸ್ ಚಾಲಕ ಅಮಾನತು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ