Belagavi NewsBelgaum NewsKannada NewsKarnataka News

*ದೇವರಾಜ್ ಅರಸು ಅವರ 109ನೇ ಜಯಂತಿಯ ಆಚರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿ ದೇವರಾಜ್ ಅರಸು ಅವರ 109ನೇ ಜಯಂತಿಯ ನಿಮಿತ್ಯ ನಗರದಲ್ಲಿ ಭವ್ಯ ಮೆರವಣಿಗೆಯನ್ನು ನಡೆಸಲಾಯಿತು.

ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸು ಅವರ 109ನೇ ಜಯಂತಿಯ ನಿಮಿತ್ಯ ಬೆಳಗಾವಿ ನಗರದಲ್ಲಿ ಭವ್ಯ ಮೆರವಣಿಗೆಯನ್ನು ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಾರ್ಯಾಲಯದ ಆವರಣದಲ್ಲಿ ಜಿಲ್ಲಾಧಿಕಾರಿಗಳಾದ ಮೊಹ್ಮದ ರೋಷನ್ ಅವರು ಮೆರವಣಿಗೆಗೆ ಚಾಲನೆಯನ್ನು ನೀಡಿದರು.

Home add -Advt

ಈ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಮೆರವಣಿಗೆಯೂ ಜಿಲ್ಲಾಧಿಕಾರಿ ಕಾರ್ಯಾಲಯದಿಂದ ಆರಂಭಗೊಂಡ ಮೇರವಣಿಗೆಯು ರಾಣಿ ಚೆನ್ನಮ್ಮ ವೃತ್ತ, ಆರ್.ಟಿ.ಓ ಸಂಗೋಳ್ಳಿ ರಾಯಣ್ಣ ವೃತ್ತ, ಎಸ್ಪಿ ಆಸೀಫ್ ರೋಡ್ ಮಾರ್ಗವಾಗಿ ಕುಮಾರ ಗಂಧರ್ವ ಕಲಾಮಂದಿರಕ್ಕೆ ತಲುಪಿ ಕೊನೆಗೊಂಡಿತು.

Related Articles

Back to top button