Politics

*ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ*

ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬೆನ್ನಲ್ಲೇ ಇದೀಗ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧವೂ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಭೂಮಿ ಕಾನೂನು ಬಾಹಿರವಾಗಿ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಕೆಐಎಡಿಬಿ ನಿವೇಶನ ಹಂಚಿಕೆ ವಿಚಾರವಾಗಿ ಆನ್ ಲೈನ್ ನಲ್ಲಿ ಪ್ರಕ್ರಿಯೆ ನಡೆಸಬೇಕಿತ್ತು. ಆದರೆ ಆನ್ ಲೈನ್ ನಲ್ಲಿ ಪ್ರಕ್ರಿಯೆ ನಡೆಸದೇ ಕೈಗಾರಿಕಾ ಸಚಿವರ ಕಂಪನಿಗಳಿಗೆ ಭೂಮಿ ಹಂಚಲಾಗಿದೆ ಎಂದು ಆರೋಪಿಸಲಾಗಿದೆ. ಬಿಡದಿ, ವಸಂತನರಸಾಪುರ, ದೊಡ್ಡಬಳ್ಳಾಪುರ ಸೇರಿದಂತೆ ಹಲವು ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಅಧಿಕಾರಿಗಳೂವ್ ಸಾಥ್ ನೀಡಿದ್ದಾರೆ. ಈ ನಿಟ್ಟಿನಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.


Home add -Advt

Related Articles

Back to top button