Belagavi NewsBelgaum NewsKarnataka News

*ಬೆಳಗಾವಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿಯನ್ನು ಹಿಡಿದು ಹಿಗ್ಗಾ ಮುಗ್ಗಾ ಧರ್ಮದೇಟು ನೀಡಿದ ಸಾರ್ವಜನಿಕರು*

ಪ್ರಗತಿವಾಹಿನಿ ಸುದ್ದಿ: ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ.

ಬಾಲಕಿ ಕಿರುಚಾಡುತ್ತಿದ್ದಂತೆ ಓಡಿಬಂದ ಸಾರ್ವಜನಿಕರು ಕಾಮುಕನನ್ನು ಹಿಡಿದು ಧರ್ಮದೇಟು ನೀಡಿದ್ದಾರೆ. ಸುನೀಲ್ ದೀಪಾಳೆ ಎಂಬಾತ 12 ವರ್ಷದ ಬಾಲಕಿಯನ್ನು ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ನಲ್ಲಿ ಕರೆದೊಯ್ದಿದ್ದಾನೆ. ನಿರ್ಜನ ಪ್ರದೇಶಕ್ಕೆ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

Home add -Advt

ಬಾಲಕಿ ಕಿರುಚಾಡಿದ್ದಾಳೆ. ಚೀರಾಟ ಕೇಳಿದ ಸ್ಥಳೀಯರು ಸ್ಥಳಕ್ಕೆ ಓಡಿಬಂದಿದ್ದು, ಕಾಮುಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button