Kannada NewsKarnataka NewsNationalPolitics

*ಬಿಲ್ ಪಾಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತರು*

ಪ್ರಗತಿವಾಹಿನಿ ಸುದ್ದಿ: ಜಲ ಜೀವನ್ ಮಿಷನ್ ಕಾಮಗಾರಿಯ ಬಿಲ್ ಪಾಸ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಚಿಕ್ಕನಾಯಕನಹಳ್ಳಿ ಜಿಲ್ಲಾ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಬಿಲ್ ಪಾಸ್ ಮಾಡಲು ಗುತ್ತಿಗೆದಾರ ಚಿಕ್ಕೇಗೌಡ ಎಂಬುವವರ ಬಳಿ ಒಂದೂವರೆ ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ಮಾಹಿತಿಯನ್ನು ಆಧರಿಸಿ ಇಂದು ಲೋಕಾಯುಕ್ತ ಡಿವೈಎಸ್‌ಪಿ ಉಮಾಶಂಕರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Home add -Advt

ಇಬ್ಬರು AE ಗಳಾದ ಶಶಿಕುಮಾರ್ ಹಾಗೂ ಕಿರಣ್ ಕುಮಾರ್ ಲಂಚ ಸ್ವೀಕರಿವಾಗಲೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಲಂಚ ಪಡೆಯುವಂತೆ ಜಿಲ್ಲಾ ಪಂಚಾಯತ್ AEE ಉಮಾಮಹೇಶ್ ಎಂಬಾತ AEಗಳಿಗೆ ನಿರ್ದೇಶನ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಲೋಕಾಯುಕ್ತ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

Related Articles

Back to top button