ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಕಟ್ಟೆಚ್ಚರಕ್ಕೆ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಯಾದಗಿರಿ, ಬಾಗಲಕೋಟೆ, ಕಲಬುರ್ಗಿ, ಬೀದರ್, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿಯೂ ವರುಣಾರ್ಭಟ ಜೋರಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಾವೇರಿ, ಕೊಪ್ಪಳ, ಗದಗ, ಧಾರವಾಡ, ವಿಜಯಪುರ, ವಿಜಯನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಚಿಕ್ಕಬಲ್ಲಾಪುರ, ಚಾಮರಾಜನಗರ, ದಾವನಗೆರೆ, ಕೋಲಾರ, ಮೈಸೂರು, ಮಂಡ್ಯ, ರಾಮನಗರ ಜಿಲೆಗಳಲ್ಲಿಯೂ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ