Karnataka NewsLatest

ಬೀಚ್ ನಲ್ಲಿ ಯುವತಿಯ ಬಿಕಿನಿ ಫೋಟೋಶೂಟ್: ಪೊಲೀಸರಿಂದ ತಡೆ

ಪ್ರಗತಿವಾಹಿನಿ ಸುದ್ದಿ: ಯುವತಿಯೊಬ್ಬಳು ಬೀಚ್ ನಲ್ಲಿ ಬಿಕಿನಿ ಫೋಟೋಶೂಟ್ ಮಾಡಿಸಿಕೊಳ್ಳುತ್ತಿದ್ದ ವೇಳೆ ಪೊಲೀಸರು ತಡೆದಿರುವ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ.

ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಯುವತಿ ಬಿಕಿನಿ ಫೋಟೊ ಶೂಟ್ ಮಾಡಿಸಿಕೊಳ್ಳುತ್ತಿದ್ದ ವೇಳೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ.

Home add -Advt

ಸ್ಥಳಕ್ಕೆ ತೆರಳಿದ ಪೊಲೀಸರು ಬಿಕಿನಿ ಫೊಟೋಶೂಟ್ ಗೆ ತಡೆಯೊಡ್ಡಿದ್ದಾರೆ. ಅಲ್ಲದೇ ಯುವತಿಗೆ ಬಿಕಿನಿ ಬಟ್ಟೆ ಬದಲಿಸಿಕೊಳ್ಳುವಂತೆ ಸೂಚಿಸಿದ್ದಾರೆ.

ಇದೇ ವಿಚಾರವಾಗಿ ಇನ್ ಸ್ಟಾಗ್ರಾಂ ನಲ್ಲಿ ಹೇಳಿಕೆ ನೀಡಿರುವ ಯುವತಿ ಪಡುಬಿದರೆ ಬೀಚ್ ನಲ್ಲಿ ಕಹಿ ಅನುಭವವಾಗಿದೆ. ಫೋಟೋಶೂಟ್ ಮಾಡಿಸುತ್ತಿದ್ದಗ ಪೊಲೀಸರು ಬಟ್ಟೆ ಬದಲಿಸುವಂತೆ ಹೇಳಿದ್ದಾರೆ. ಬೇರೆ ಬಟ್ಟೆ ಹಾಕದಿದ್ದರೆ ಸ್ಥಳೀಯರು ಹಲ್ಲೆ ನಡೆಸುತ್ತಾರೆ ಎಂದಿದ್ದಾರೆ. ಈ ರೀತಿ ನೈತಿಕ ಪೊಲೀಸ್ ಗಿರಿ ನಡೆಸಲು ಸ್ಥಳೀಯರು ಯಾರು? ಎಂದು ಯುವತಿ ಪ್ರಶ್ನಿಸಿದ್ದಾಳೆ.


Related Articles

Back to top button