
ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಕೆ.ಹೆಚ್.ಶ್ರೀನಿವಾಸ್ ವಿಧಿವಶರಾಗಿದ್ದಾರೆ. ಹಿರಿಯ ನಾಯಕನ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಚಿವರು, ಜನತಾ ಪರಿವಾರದ ಹಿರಿಯ ನಾಯಕರು ಆದ ಕೆ.ಹೆಚ್.ಶ್ರೀನಿವಾಸ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ರಾಜಕೀಯದ ಜೊತೆಗೆ ಕಲೆ, ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಬಹುಮುಖಿ ವ್ಯಕ್ತಿ ಶ್ರೀನಿವಾಸ್ ಅವರು ಹಳೆಯ ಮತ್ತು ಹೊಸ ತಲೆಮಾರಿನ ರಾಜಕಾರಣದ ಕೊಂಡಿಯಾಗಿದ್ದರು.
ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ