ಪ್ರಗತಿವಾಹಿನಿ ಸುದ್ದಿ : ತೈಲ ಮಾರುಕಟ್ಟೆ ಕಂಪನಿಗಳು ಹೋಟೆಲ್, ರೆಸ್ಟೋರೆಂಟ್ ಮೊದಲಾದ ಕಡೆ ಹೆಚ್ಚಾಗಿ ಬಳಸುವ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ದರವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದ್ದು, ಈ ಮೂಲಕ ತೈಲ ಮಾರುಕಟ್ಟೆ ಕಂಪನಿಗಳು ಸತತ ನಾಲ್ಕನೇ ತಿಂಗಳೂ 19 ಕೆಜಿ ತೂಕದ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ದರವನ್ನು ಏರಿಕೆ ಮಾಡಿದಂತಾಗಿದೆ.
ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 39ರೂ. ನಷ್ಟು ಏರಿಕೆ ಮಾಡಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಸಿಲಿಂಡರ್ ದರವನ್ನು 39 ರೂ.ನಷ್ಟು ಹೆಚ್ಚಿಸಿವೆ. 14 ಕೆಜಿ ಗೃಹಬಳಕೆಯ ಸಿಲಿಂಡರ್‌ನ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ.
ಈ ಹಿಂದೆ ವಾಣಿಜ್ಯ ಬಳಕೆಯ ಸಿಲಿಂಡರ್ ಬೇಳೆಯನ್ನು ಜುಲೈನಲ್ಲಿ ಪ್ರತಿ ಸಿಲಿಂಡರ್‌ಗೆ 30 ರೂ., ಜೂನ್‌ನಲ್ಲಿ 69.50 ಮತ್ತು ಮೇನಲ್ಲಿ 19 ರೂ. ಹೆಚ್ಚಳ ಮಾಡಲಾಗಿತ್ತು. ಇದೀಗ ಸತತ ನಾಲ್ಕನೇ ತಿಂಗಳು ಕೂಡ ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ರೆಸ್ಟೋರೆಂಟ್, ಹೋಟೆಲ್, ಸಣ್ಣ ಕೈಗಾರಿಕೆ, ವಿವಿಧ ವಲಯಗಳ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ