
ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಪರಶುರಾಮ್ (40) ಹಾಗೂ ಹನುಮಂತ (35) ಮೃತರು. ಇಬ್ಬರೂ ಕೊಪ್ಪಳ ತಾಲೂಕಿನ ವಣಗೇರಿ ಗ್ರಾಮದ ನಿವಾಸಿಗಳು. ಕಡೆಕೊಪ್ಪ ಬಳಿ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ಅಪಘಾತ ಸಂಭವಿಸುತ್ತಿದ್ದಂತೆ ಲಾರಿ ಚಾಲಕ ಲಾರಿ ಸಮೇತ ಎಸ್ಕೇಪ್ ಆಗಿದ್ದಾನೆ. ಘಟನಾ ಸ್ಥಳಕ್ಕೆ ಕುಷ್ಟಗಿ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.



