ಪ್ರಗತಿವಾಹಿನಿ ಸುದ್ದಿ: ಐವರು ಪುರುಷರು ಮಹಿಳೆಯ ಮೇಲೆ ಅತ್ಯಾಚಾರ ಮಾಡಿ ನೃತ್ಯ ಮಾಡಲು ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನ ಬಫ್ನಲ್ಲಿ ನಡೆದಿದೆ.
ಆರೋಪಿಗಳು 34 ವರ್ಷದ ಮಹಿಳೆಯನ್ನು ಬಲವಂತವಾಗಿ ಗೋಡೌನ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಟಿವಿಯಲ್ಲಿ ವೀಡಿಯೊಗಳನ್ನು ವೀಕ್ಷಿಸಿದ ನಂತರ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆ ಎನ್ನಲಾಗಿದೆ. ಅದಾದ ಬಳಿಕ ಮಹಿಳೆಗೆ ಬೆಲ್ನಿಂದ ಥಳಿಸಿ, ಅರ್ಧ ಗಂಟೆಗಳ ಕಾಲ ಬೆತ್ತಲೆಯಾಗಿ ನೃತ್ಯ ಮಾಡುವಂತೆ ಒತ್ತಾಯಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ಈವರೆಗೆ ಯಾರನ್ನು ಬಂಧಿಸಿಲ್ಲ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ