*ಸೆ.10 ರವರೆಗೆ ಕರಾವಳಿ ಭಾಗದಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್*
ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಇದೀಗ ಉತ್ತರ ಕರ್ನಾಟಕ ಭಾಗ ಸೇರಿದಂತೆ ದಕ್ಷಿಣ ಒಳನಾಡು ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 10ರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ಹೌದು ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಸೆಪ್ಟೆಂಬರ್ 10 ರವರೆಗೂ ಭಾರೀ ಮಳೆ ಮುನ್ಸೂಚನೆ ಇದೆ. ಇನ್ನು ಶಿವಮೊಗ್ಗ, ಹಾಸನ ಚಿಕ್ಕಮಗಳೂರಿಗೆ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಿಗೆ ಸಾಧಾರಣ ಮಳೆಯಾಗಲಿದ್ದು, ಭಾರೀ ಗಾಳಿ 30 ರಿಂದ 40 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ಭಾರೀ ಮಳೆಯಾಗಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಸನ ಹಾಗೂ ಚಿಕ್ಕಮಗಳೂರಿಗೆ ಭಾರೀ ಮಳೆಯಾಗಲಿದ್ದು, ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಅಂದರೆ ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು ಸುಮಾರು 64.5 ರಿಂದ 115.5 ಮಿಮೀ ಮಳೆ ಬೀಳುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ