Latest

ಸಿಎಂ ಮಂಗಳವಾರ ತಿರುಪತಿಯಿಂದ ಬೆಳಗಾವಿಗೆ

 

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ 

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಬೆಳಗ್ಗೆ ತಿರುಪತಿಯಿಂದ ನೇರವಾಗಿ ಬೆಳಗಾವಿಗೆ ಆಗಮಿಸಲಿದ್ದಾರೆ.

ಬೆಳಗ್ಗೆ ವಿಶೇಷ ವಿಮಾನದಲ್ಲಿ 9 ಗಂಟೆಗೆ ಸಾಂಬ್ರಾ ವಿಮಾನನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಕುಮಾರಸ್ವಾಮಿ ಸೋಮವಾರೆ ಸಂಜೆ ಕುಟುಂಬದ ಸುಮಾರು 25 ಜನರೊಂದಿಗೆ ವಿಶೇಷ ವಿಮಾನದಲ್ಲಿ ತಿರುಪತಿಗೆ ತೆರಳಿದ್ದಾರೆ. ರಾತ್ರಿ ಅಲ್ಲಿಯೇ ತಂಗಿದ್ದು, ಮಂಗಳವಾರ ಬೆಳಗ್ಗೆ ಹೊರಡಲಿದ್ದಾರೆ. ಮಂಗಳವಾರ ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿರುವ ಅವರು ಮಧ್ಯಾಹ್ನ 3 ಗಂಟೆಗೆ ಬೈಲಹೊಂಗಲದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳುವರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button