Karnataka News

*ನಾಲ್ವರು GST ಅಧಿಕಾರಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಾಲ್ವರು ಕೇಂದ್ರದ ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.

ಕೇಸ್ ಒಂದನ್ನು ಮುಚ್ಚಿ ಹಾಕಲು ಬರೋಬ್ಬರಿ 1.50 ಕೋಟಿ ಹಣ ಪಡೆದಿದ್ದ ಜಿಎಸ್ ಟಿ ಅಧಿಕಾರಿಗಳು ಬಳಿಕ ಎಸ್ಕೇಪ್ ಆಗಿದ್ದರು. ಉದ್ಯಮಿಯೊಬ್ಬರು ಈ ಬಗ್ಗೆ ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಕಾರ್ಯಾಚರಣೆ ನಡೆಸಿದ ಪೊಲೀಸರು, ಮಹಿಳಾ ಅಧಿಕಾರಿ ಸೇರಿದಂತೆ ನಾಲ್ವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್, ಸಿನೀಯರ್ ಇಂಟಲಿಜನ್ಸ್ ಆಫೀಸರ್ ನಾಗೇಶ್ ಬಂಧಿತ ಅಧಿಕಾರಿಗಳು.

ಹಿರಿಯ ಅಧಿಕಾರಿಗಳ ಅನುಮತಿಯಿಲ್ಲದೇ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಹಣ ದೋಚಿ ಈ ನಾಲ್ವರು ಅಧಿಕಾರಿಗಳು ಪರಾರಿಯಾಗಿದ್ದರು.


Related Articles

Back to top button