Belagavi NewsBelgaum NewsKannada NewsKarnataka News
		
	
	
ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗಣೇಶಪುರ ಮಹಾಲಕ್ಷ್ಮೀ ನಗರದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೂಮಿ ಪೂಜೆ ನೆರವೇರಿಸಿದರು.

ಮಹಾಲಕ್ಷ್ಮೀ ನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು, ಸ್ಥಳೀಯ ನಿವಾಸಿಗಳ ಸಮ್ಮುಖದಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು. ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಮತ್ತು ಸಮಯ ಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಚಿವರು ಗುತ್ತಿಗೆದಾರರಿಗೆ ಸೂಚಿಸಿದರು.
ಈ ವೇಳೆ ಸ್ಥಳೀಯ ನಿವಾಸಿಗಳು, ಗ್ರಾಮ ಪಂಚಾಯತ್ ಸಿಬ್ಬಂದಿ, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಗುತ್ತಿಗೆದಾರರು ಉಪಸ್ಥಿತರಿದ್ದರು.
					
				
					
					
					
					
					
					
					

