ಪ್ರಗತಿವಾಹಿನಿ ಸುದ್ದಿ: ಸೆಪ್ಟೆಂಬರ್ 22ರಂದು ನಿಗದಿಯಾಗಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಸೆ.22ರಂದು ನಿಗದಿಯಾಗಿದ್ದ ಪಿಎಸ್ ಐ ಪರೀಕ್ಷೆ ಮುಂದೂಡಲಾಗಿದೆ. ಸೆ.28ರಂದು 402 ಪಿಎಸೈ ಹುದ್ದೆ ನೇಮಕಾತಿ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದರು.
ಸೆ.22ರಂದು ವಿವಿಧ ಇಲಾಖೆಯ ಪರೀಕ್ಷೆಗಳು ನಡೆಯುವುದರಿಂದ ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವಂತೆ ಅಭ್ಯರ್ಥಿಗಳು ಹಾಗೂ ಬಿಜೆಪಿ ನಾಯಕರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ 22ರಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಸೆ.28ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ