
ಪ್ರಗತಿವಾಹಿನಿ ಸುದ್ದಿ: ಸಿಪಿಐ(ಎಂ) ಹಿರಿಯ ನಾಯಕ ಸೀತಾರಾಂ ಯೆಚೂರಿ ವಿಧಿವಶರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.
ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ನ್ಯೂಮೋನಿಯಾದಿಂದ ಬಳಲುತ್ತಿದ್ದ ಸೀತರಾಂ ಯೆಚೂರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.