ಪ್ರಗತಿವಾಹಿನಿ ಸುದ್ದಿ: ಕಾರಿನ ಮೇಲೆ ಲಾರಿ ಉರುಳಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ತಾಲೂಕಿನ ಚಂದ್ರಗಿರಿ ಬಳಿ ನಡೆದಿದೆ.
ಚಿಕ್ಕಬಳ್ಳಾಪುರದ ಹರಿಸ್ಥಳ ನಿವಾಸಿಗಳಾದ ಮುನಿವೆಂಕಟ ರೆಡ್ಡಿ, ಕಾರು ಚಾಲಕ ರಮೇಶ್, ಮಂಜುನಾಥ್ ಮೃತ ದುರ್ದೈವಿಗಳು. ಅಪಘಾತದಲ್ಲಿ ತೇಜಸ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಟುಂಬ ಸಮೇತ ಎರಡು ಕಾರಿನಲ್ಲಿ ತಿರುಪತಿಗೆ ಹೋಗಿ ದೇವರ ದರ್ಶನ ಪಡೆದು ಚಿಕ್ಕಬಳ್ಳಾಪುರಕ್ಕೆ ವಾಪಾಸ್ ಆಗುತ್ತಿದ್ದಾಗ ಒಂದು ಕಾರಿನ ಮೇಲೆ ಟೊಮ್ಯಾಟೊ ಸಾಗಿಸುತ್ತಿದ್ದ ಲಾರಿ ಉರುಳಿ ಬಿದ್ದಿದೆ. ಕಾರು ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ