Karnataka NewsLatest

*ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್: ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ 3ನೇ ಚಾರ್ಜ್ ಶೀಟ್ ನ್ನು ಎಸ್ ಐಟಿ ಕೋರ್ಟ್ ಗೆ ಸಲ್ಲಿಕೆ ಮಾಡಿದೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿರುವ ಎಸ್ ಐಟಿ ಅಧಿಕಾರಿಗಳು 120 ಸಾಕ್ಷಿಗಳನ್ನು ಒಳಗೊಂಡ 1691 ಪುಟಗಳ ದೋಷಾರೋಪ ಪಟ್ಟಿಯನ್ನು ಕೋರ್ಟ್ ಗೆ ಸಲ್ಲಿಗೆ ಮಾಡಿದ್ದಾರೆ.

ಗನ್ ಪಾಯಿಂಟ್ ನಲ್ಲಿ ಬೆದರಿಸಿ ಪ್ರಜ್ವಲ್ ಮಹಿಳೆ ಮೇಲೆ ಅತ್ಯಾಚಾರವೆಸಗಿರುವುದು ನಿಜ ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಕೃತ್ಯದ ವಿಡಿಯೋ ಮಾಡಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರವೆಸಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಪ್ರಜ್ವಲ್ ಸಂಸದ ಎಂಬ ಕಾರಣಕ್ಕೆ ಭಯದಿಂದ ದೂರು ಕೊಡದೇ ಸಂತ್ರಸ್ತೆ ಸುಮ್ಮನಾಗಿದ್ದರು ಎಂದು ಸಂತ್ರಸ್ತೆಯ ಹೇಳಿಕೆ ನೀಡಿದ್ದಾಗಿ ಚಾರ್ಜ್ ಶೀಟ್ ನಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Related Articles

Back to top button