
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಡಿ ದೂರು ದಾಖಲಿಸಿರುವ ಗುತ್ತಿಗೆದಾರ ಚಲುವರಾಜು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಸಿಎಂ ಸಿದ್ದರಾಮಯ್ಯ ಭೇಟಿಯಾದ ಚಲುವರಾಜು, ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿ ಅಸಹ್ಯವಾಗಿ ವರ್ತಿಸಿರುವ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. FIR ಆದ ಬಳಿಕ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮನವಿ ಮಾಡಿದರು. ಅಲ್ಲದೇ ಮುನಿರತ್ನ ವಿರುದ್ಧ ದೂರು ಸಲ್ಲಿಸಿದರು.