National

*ಭಾರಿ ಮಳೆಗೆ ಮೂರು ಅಂತಸ್ತಿನ ಕಟ್ಟಡ ಕುಸಿತ: 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ನಿರಂತರ ಮಳೆಯಿಂದಾಗಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 10 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಮೀರತ್ ನ ಜಾಕಿರ್ ಕಾಲೋನಿಯಲ್ಲಿ ಈ ದುರಂತ ಸಂಭವಿಸಿದೆ. ಓರ್ವ ಮಗು ಸೇರಿದಂತೆ 10 ಜನರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ.

ಕಟ್ಟಡದ ಅವಶೇಷಗಳ ಅಡಿ ಇನ್ನಷ್ಟು ಜನರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭಾರಿ ಮಳೆಯಿಂದಾಗಿ ಕಟ್ಟದ ಕುಸಿದು ಬಿದ್ದಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸೀಪಕ್ ಮೀನಾ ತಿಳಿಸಿದ್ದಾರೆ.

Home add -Advt

Related Articles

Back to top button