ಪ್ರಗತಿವಾಹಿನಿ ಸುದ್ದಿ: ಮಹಾರಾಷ್ಟ್ರದ ಪಾಲ್ವರ್ ಜಿಲ್ಲೆಯ ನಲಸೋಪಾರಾ ಪ್ರದೇಶದ ಸಂತೋಷ್ ಭವನದಲ್ಲಿ 32 ವರ್ಷದ ಮಹಿಳೆಯಗೆ ಚಾಕು ತೋರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಆರೋಪಿಗಳನ್ನು ಜಿತೇಂದ್ರ ಯಾದವ್ ಮತ್ತು ಅವಿ ಜೈಸ್ವಾಲ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಹಿಳೆಯ ಹೇಳಿಕೆಯನ್ನು ಆಧರಿಸಿ, ತುಳಿಂಜ್ ಪೊಲೀಸರು ಆರೋಪಿಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್ 70 (1) ಮತ್ತು 351 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ