ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಪೊಲೀಸರಿಂದ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಶಾಕ್ ನೀಡಿದೆ. ಜಾಮೀನಿನ ನಿರೀಕ್ಷೆಯಲ್ಲಿದ್ದ ಮುನಿರತ್ನ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ.
ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಎರಡು ದಿನಗಳ ಕಾಲ ಕಷ್ಟಡಿಗೆ ಪಡೆದಿದ್ದರು. ಇಂದು ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಬೆಂಗಳೂರಿನ 82ನೇ ಸಿಸಿಹೆಚ್ ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ಮುನಿರತ್ನ ಪರ ವಕೀಲರು ಮುನಿರತ್ನ ಅವರನ್ನು ತಿರುಪತಿಗೆ ತೆರಳುತ್ತಿದ್ದ ವೇಳೆ ಬಂಧಿಸಲಾಗಿದೆ. ಅವರ ಬಂಧನ ಕ್ರಮ ಕಾನೂನು ಬಾಹಿರ ಹಾಗಾಗಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಒಂದು ದಿನದವರೆಗೆ ಮುನಿರತ್ನ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.
ನ್ಯಾಯಾಂಗ ಬಂಧನ ಹಿನ್ನೆಲೆಯಲ್ಲಿ ಪೊಲೀಸರು ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ