Latest

*ಭೀಕರ ಕಾರು ಅಪಘಾತ: ಒಂದೇ ಕುಟುಂಬದ ಐವರು ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೆಮಾರನಹಳ್ಳಿಯಲ್ಲಿ ನಡೆದಿದೆ.

Home add -Advt

ಕುಟುಂಬದವರು ಸಂಬಂಧಿಕರ ತಿಥಿಕಾರ್ಯ ಮುಗಿಸಿ ದೇವಸ್ಥಾನಕ್ಕೆಂದು ತೆರಳುತ್ತಿದ್ದರು. ಈ ವೇಳೆ ಅವರ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಐವರೂ ಕುಣಿಗಲ್ ಮೂಲದವರು ಎಂದು ತಿಳಿದುಬಂದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button