*ಸೆ. 18 ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ವತಿಯಿಂದ ಹಳೆ ಜಿಲ್ಲಾ ಪಂಚಾಯತ ಕಟ್ಟಡದಲ್ಲಿ ಸೆ.18 ರಂದು ಮದ್ಯಾಹ್ನ 4 ಗಂಟೆಗೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಬೆಳಗಾವಿಯ ಉತ್ತರ ವಲಯದ ವಿಧಾನ ಸಭೆ ಶಾಸಕರಾದ ಆಸೀಫ್ (ರಾಜು)ಸೇಶ್ ಅವರು ಅಧ್ಯಕ್ಷತೆ ವಹಿಸುವರು. ವಿಧಾನಸಭೆಯ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ವಾಯವ್ಯ ಸಾರಿಗೆ ನಿಗಮ ನಿಯಮಿತದ ಅಧ್ಯಕ್ಷರಾದ ಭರಮಗೌಡ ಕಾಗೆ, ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ, ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಸಂಸದರಾದ ಈರಣ್ಣ ಕಡಾಡಿ, ಪ್ರಿಯಾಂಕಾ ಜಾರಕಿಹೊಳಿ, ಜಗದೀಶ ಶೆಟ್ಟರ, ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಪಾಟೀಲ ಅವರು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸುವರು.
ಪ್ರಾದೇಶಿಕ ಆಯುಕ್ತರಾದ ಸಂಜಯ ಶೆಟ್ಟೆಣ್ಣವರ, ಬೆಳಗಾವಿ ಉತ್ತರ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ವಿಕಾಶ್ ಕುಮಾರ ವಿಕಾಶ್, ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಭೀಮಾಶಂಕರ ಗುಳೇದ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ ಶಿಂಧೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ಧೇಶಕರು ನಾಗರಾಜ, ವಾಕರಸಾ ಸಂಸ್ಥೆ ಬೆಳಗಾವಿ ವಿಭಾಗೀಯ ನಿಯಾಂತ್ರಣಾಧಿಕಾರಿ ರಾಜೇಶ ಹುದ್ದಾರ, ಬೆಳಗಾವಿ ಹೆಸ್ಕಾಂ ಅಧೀಕ್ಷಕ ಇಂಜಿನಿರಿಂಗ್ ಪ್ರವೀಣಕುಮಾರ ಚಿಕಾಡೆ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಚಿದಾನಂದ ಬಾಕೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಗುರುಪಾದೆಯ್ಯ ಹಿರೇಮಠ ಅವರು ಉಪಸ್ಥಿತರಿರುವರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ