ಪ್ರಗತಿವಾಹಿನಿ ಸುದ್ದಿ: ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದದ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಶಾಕಿಂಗ್ ಆರೋಪ ಮಾಡಿದ್ದು, ಪ್ರಾಣಿಗಳ ಕೊಬ್ಬು ಬಳದ್ಸಲಾಗಿದೆ ಎಂದು ಹೇಳಿದ್ದಾರೆ.
ಆಂಧ್ರದ ಈ ಹಿಂದಿನ ವೈಎಸ್ ಆರ್ ಕಾಂಗ್ರೆಸ್ ನೇತೃತ್ವದ ಜಗನ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದಿಂದ ನೀಡಲಾಗುವ ಪ್ರಸಾದ ತಿಮ್ಮಪ್ಪನ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿತ್ತು. ಅಲ್ಲದೇ ಗುಣಮಟ್ಟವಿಲ್ಲದ ವಸ್ತುಗಳನ್ನು ಬಳಕೆ ಮಾಡಲಾಗುತ್ತಿತ್ತು ಎಂದು ಆರೋಪಿಸಿದ್ದಾರೆ.
ವೈಎಸ್ ಆರ್ ಕಾಂಗ್ರೆಸ್ ನ ಕಳೆದ 5 ವರ್ಷಗಳ ಆಡಳಿತದಲ್ಲಿ ತಿರುಮಲದ ಪಾವಿತ್ರ್ಯತೆಯನ್ನೇ ಹಾಳು ಮಾಡಲಾಗಿದೆ. ತಿರುಪತಿ ಲಡ್ಡುವಿನಲ್ಲಿ ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಕೆ ಮಾಡಿದ್ದರು ಎಂದಿದ್ದಾರೆ.
ನಾವು ದೇವಸ್ಥಾನದ ಪಾವಿತ್ರ್ಯತೆ, ಸಂಪ್ರದಾಯಗಳನ್ನು ಮರುಸ್ಥಾಪಿಸುವುದರ ಜೊತೆಗೆ ದೇವಾಲಯಗಳನ್ನು ಉಳಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿದೆ. ಇನ್ನೊಂದೆಡೆ ಈ ಆರೋಪಗಳನ್ನು ತಳ್ಳಿ ಹಾಕಿರುವ ವೈಎಸ್ ಆರ್ ಕಾಂಗ್ರೆಸ್, ಚಂದ್ರಬಾಬು ನಾಯ್ಡು ದುರುದ್ದೇಶದಿಂದ ಇಂತಹ ಆರೋಪ ಮಾಡುತ್ತಿದ್ದಾರೆ. ರಾಜಕೀಯ ಲಾಭಕ್ಕಾಗಿ ಧಾರ್ಮಿಕ ಭಾವನೆಗಳನ್ನು ಈ ರೀತಿ ಬಳಸಿಕೊಳ್ಳುವ ಮಟ್ಟಕ್ಕೆ ಇಳಿದಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ