Belagavi NewsBelgaum NewsKannada NewsKarnataka News

*ಎಂಟು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ”

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲಭಾಗಗಳಲ್ಲಿ ಸಾಧಾರಣ ಮಳೆ ಬೀಳಬಹುದು. ಆದರೆ ಒಳನಾಡಿನ ಉಳಿದ ಜಿಲ್ಲೆಗಳ ಮೇಲೆ ಮುಖ್ಯವಾಗಿ ಶುಷ್ಕ ಹವಾಮಾನದ ಸಾಧ್ಯತೆಯಿದೆ.

ಇಂದು ಚಿಕ್ಕಮಗಳೂರು ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯ ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ. ಮಳೆ ಆಗುವ ಸಾಧ್ಯತೆಗಳು ಕಡಿಮೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Home add -Advt

Related Articles

Back to top button