Latest

*ಕಾಲೇಜು ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಯುವಕನನ್ನು ಬಂಧಿಸುವಂತೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಯುವಕನೊಬ್ಬ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಯರು ಯುವಕನನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಕಾಲೇಜಿನಲ್ಲಿ ವಿದ್ಯಾರ್ಥಿಯರ ಪ್ರತಿಭಟನೆ ತೀವ್ರಗೊಂಡಿದ್ದು, ಕುಂಬಳಗೋಡು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Home add -Advt

ವಿದ್ಯಾರ್ಥಿನಿಯೊಬ್ಬಳು ಶೌಚಾಲಯಕ್ಕೆ ಹೋಗಿದ್ದಾಗ ಮೊಬೈಲ್ ಇರುವುದು ಕಂಡುಬಂದಿದೆ. ಇದೇ ವೇಳೆ ಯುವಕನೊಬ್ಬ ಮಹಿಳಾ ಶೌಚಾಲಯದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ. ಹೊರ ಬಂದ ವಿದ್ಯಾರ್ಥಿನಿ ಇತರ ವಿದ್ಯಾರ್ಥಿನಿಯರಿಗೆ ವಿಷಯ ತಿಳಿಸಿದ್ದಾಳೆ. ರೊಚ್ಚಿಗೆದ್ದ ವಿದ್ಯಾರ್ಥಿನಿಯರು ಅನುಮಾನಾಸ್ಪದ ಯುವಕನನ್ನು ಬಂಧಿಸಿ, ಮೊಬೈಲ್ ವಶಕ್ಕೆ ಪಡೆಯುವಂತೆ ಆಗ್ರಹಿಸಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿ ಮೊಬೈಲ್ ಪರಿಶೀಲನೆ ನಡೆಸಿದ್ದಾರೆ.

Related Articles

Back to top button