Kannada NewsKarnataka News
*ಪ್ರಿತಿಗೆ ವಿರೋಧ: ವಿದ್ಯಾರ್ಥಿಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಚಾಕುವಿನಿಂದ ಇರಿದು ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯು ಕಲಬುರಗಿ ಜಿಲ್ಲೆಯ ಹೊರವಲಯದ ನಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಸುಮೀತ್ ಮಲ್ಲಾಬಾದ್ (19) ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಸುಮೀತ್ ಕಳೆದ ನಾಲ್ಕೈದು ದಿನಗಳ ಹಿಂದೆ ತಾಯಿಯೊಂದಿಗೆ ಊರಿಗೆ ಬಂದಿದ್ದ. ಸುಮೀತ್ ಸಹೋದರ ಸಚಿನ್ ಯುವತಿಯೊಬ್ಬಳ ಜೊತೆಗೆ ಸ್ನೇಹ ಹೊಂದಿದ್ದ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಯುವತಿಯ ಕುಟುಂಬಸ್ಥರು ಸಚಿನ್ ಮೇಲಿನ ದ್ವೇಷಕ್ಕೆ ಸುಮೀತ್ ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.




