Karnataka NewsLatest

*ವಾಲ್ಮೀಕಿ ನಿಗದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಚಂದ್ರಶೇಖರ್ ಮಕ್ಕಳ ಶೈಕ್ಷಣಕ್ಕಾಗಿ ಸರ್ಕಾರದಿಂದ ಧನ ಸಹಾಯ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೆ ಶರಣಾಗಿರುವ ಹಿನ್ನೆಲೆಯಲ್ಲಿ ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರಾಜ್ಯ ಸರ್ಕಾರ ಸಹಯಧನ ಬಿಡುಗಡೆ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನಾಂಕ: 19-07-2024 ರಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ ಕಛೇರಿ ಅಧೀಕ್ಷಕರಾದ ದಿವಂಗತ ಚಂದ್ರಶೇಖರನ್ ಪಿ ಇವರ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸದರಿ ಕುಟುಂಬಕ್ಕೆ ರೂ.25.00 ಲಕ್ಷಗಳ ಸಹಾಯಧನ ನೀಡುವುದಾಗಿ ಘೋಷಣೆ ಮಾಡಿದ್ದರು.

ಅದರಂತೆ ದಿವಂಗತ ಚಂದ್ರಶೇಖರನ್ ಪಿ ಇವರ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸದರಿ ಕುಟುಂಬಕ್ಕೆ ರೂ.25.00 ಲಕ್ಷಗಳ ಸಹಾಯಧನವನ್ನು ಬಿಡುಗಡೆಗೊಳಿಸಲಾಗಿದೆ. ಈ ಸಂಬಂಧ ಮೃತರ ಪತ್ನಿ ಕವಿತಾ ರವರ ಬ್ಯಾಂಕ್‌ ಖಾತೆಗೆ ಪಾವತಿಸಲಾಗುತ್ತಿದೆ. ಖಜಾನೆ ಬಿಲ್ ಸಲ್ಲಿಸಲಾಗಿದ್ದು, ಇಂದು ಸಂಜೆ 4.30ರ ಒಳಗಾಗಿ ಕವಿತಾ ರವರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

ಶಿವಮೊಗ್ಗ ಜಿಲ್ಲೆ ವಿನೋಬನಗರ ಪೋಲಿಸ್ ಠಾಣೆ ಅಪರಾಧ ಸಂಖ್ಯೆ:83/2024 ಕಲಂ 360 ರೆ/ವಿ 34 ಐಪಿಸಿ ಹಾಗೂ ಕಲಂ:3(2)(v) ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಷೇಧ ಕಾಯ್ದೆ-1989ರಡಿ ಸಿಐಡಿಯ ವಿಶೇಷ ತನಿಖಾ ತಂಡ(Special Investigation Team)ವು ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುವ ಹಿನ್ನಲೆಯಲ್ಲಿ ದೌರ್ಜನ್ಯ ನಿಷೇಧ ಕಾಯ್ದೆಯ ನಿಯಮಗಳಂತೆ ರೂ.8.25 ಲಕ್ಷಗಳನ್ನು ದಿವಂಗತ ಚಂದ್ರಶೇಖರನ್ ಪಿ ಇವರ ಪತ್ನಿ ಕವಿತಾ ರವರಿಗೆ ಮಂಜೂರುಮಾಡಲಾಗಿದೆ.

ದಿವಂಗತ ಚಂದ್ರಶೇಖರನ್ ಪಿ ಇವರಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದಿಂದ ಪಾವತಿಸಬೇಕಾದ ಸಂಬಳ ಮತ್ತು ರಜೆ ನಗದೀಕರಣಗಳಿಗೆ ಸಂಬಂಧಿಸಿದ ರೂ.1,41,361ಗಳನ್ನು ಈಗಾಗಲೇ ಕವಿತಾ ರವರ ಬ್ಯಾಂಕ್ ಖಾತೆಗೆ ಪಾವತಿಸಲಾಗಿರುತ್ತದೆ ಹಾಗೂ ಮೃತರ ಮಗನಿಗೆ ಉದ್ಯೋಗ ನೀಡುವ ಕುರಿತು ಕ್ರಮವಹಿಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button