Belagavi NewsBelgaum NewsSports

*ಕ್ರೀಡೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ದೇಹವನ್ನು ಸದೃಢವಾಗಿ ಇರಿಸಿಕೊಳ್ಳಲು ಪ್ರಯತ್ನಿಸಬೇಕು: ಈರಣ್ಣಾ ಕಡಾಡಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯುವಜನತೆಯು ಹೆಚ್ಚಿನ ಸಮಯ ಮೊಬೈಲ್‌ನಲ್ಲಿ ಕಳೆಯುತ್ತಿದ್ದು, ಮಾನಸಿಕವಾಗಿ ದೈಹಿಕವಾಗಿ ದುರ್ಬಲರಾಗುತ್ತಿದ್ದಾರೆ. ಇಂದಿನ ಯುವಜನತೆ ಮೊಬೈಲ್‌ ಜಗತ್ತಿನಿಂದ ಹೊರ ಬಂದು ಕ್ರೀಡೆಯಲ್ಲಿ ಪಾಲ್ಗೊಳ್ಳುವುದರ ಮೂಲಕ ದೇಹವನ್ನು ಸದೃಢವಾಗಿ ಇರಿಸಿಕೊಳ್ಳಲು ಮುಂದಾಗುವಂತೆ ರಾಜ್ಯಸಭಾ ಸಂಸದರಾದ ಈರಣ್ಣಾ ಕಡಾಡಿ ಅವರು ಯುವಜನತೆಗೆ ಕರೆಕೊಟ್ಟರು.

ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ (ಸೆ.25) ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಕ್ರೀಡೆಯಲ್ಲಿ ಸೋಲು ಗೆಲುವು ಮಹತ್ವವಲ್ಲ ಭಾಗವಹಿಸುವುದು ಮಹತ್ವವಾಗಿದೆ. ಆಯಾ ತಾಲೂಕಿನಿಂದ ಬಂದಂತಹ ನೀವು ನಿಮ್ಮ ತಾಲೂಕನ್ನು ಪ್ರತಿನಿಧಿಸಿ ಕ್ರೀಡೆಯ ನಿಯಮಗಳಿಗೆ ಅನುಸಾರವಾಗಿ ಕ್ರೀಡೆಯಲ್ಲಿ ಭಾಗವಹಿಸಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಮ್ಮ ಜಿಲ್ಲೆಗೆ ಹೆಸರು ತರಲು ಪರಿಶ್ರಮ ಪಡಬೇಕೆಂದು ಹೇಳಿದರು.

ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ಮುಖ್ಯ ಅತಿಥಿಗಳಿಗೆ ಒಪ್ಪಿಸಿ ನಂತರ ಕ್ರೀಡಾ ಜ್ಯೋತಿ ಬೆಳಗಿಸಲಾಯಿತು. ಕ್ರೀಡಾಪಟುಗಳ ಪರವಾಗಿ ಪ್ರತಿಜ್ಞಾ ವಿಧಿಯನ್ನು ಬಾಸ್ಕೆಟಬಾಲ್ ತರಬೇತುದಾರರಾದ ವಿ.ಎಸ್.ಪಾಟೀಲ ಅವರು ಭೋದಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರಾದ ಬಿ. ಶ್ರೀನಿವಾಸ್ ಅವರು ಮಾತನಾಡಿ, ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಒಟ್ಟು 17 ಕ್ರೀಡೆಗಳನ್ನು ನಡೆಸುತ್ತಿದ್ದು, ಸೆ.25 ರಂದು 10 ಕ್ರೀಡೆಗಳು ಮತ್ತು ಸೆ.26 ರಂದು 7 ಕ್ರೀಡೆಗಳು ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ನಡೆಯಲ್ಲಿವೆ ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮಹಮ್ಮದ ಅಜರುದ್ದೀನ್, ಅರ್ಜುನ ಪ್ರಶಸ್ತಿ ವಿಜೇತರಾದ ಮುಕುಂದ ಕಿಲ್ಲೇಕರ, ನಿವೃತ್ತ ದೈಹಿಕ ನಿರ್ದೇಶಕರಾದ ಜಿ.ಎನ್‌. ಪಾಟೀಲ, ಸೈಕ್ಲಿಂಗ್ ಸಂಸ್ಥೆಯ ಕಾರ್ಯದರ್ಶಿಗಳಾದ

ಆರ್.ಎಚ್.ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕ್ರೀಡಾಕೂಟದಲ್ಲಿ ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕುಗಳಿಂದ ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಬಾಸ್ಕೆಟಬಾಲ್, ಕುಸ್ತಿ, ಶಟಲ್ ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಈಜು ಹಾಗೂ ನೆಟ್‌ಬಾಲ್ ಸ್ಪರ್ಧೆಗಳಲ್ಲಿ 1000ಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಭಾಗವಹಿಸಿದ್ದರು.

https://www.facebook.com/share/p/vxtkKEvwn3r4HMhx/?mibextid=xfxF2i

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button