Karnataka NewsLatest

*ಭೀಕರ ರಸ್ತೆ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಸಾವನ್ನಪ್ಪಿದ ಘಟನೆ ಹುನಗುಂದ ತಾಲೂಕಿನ ಧನ್ನೂರ ಟೋಲ್ ನಾಕಾದ ಬಳಿ ನಡೆದಿದೆ.

ಧನ್ನೂರ ಟೋಲ್ ನಾಕಾ ಬಳಿ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಲಕ್ಷ್ಮಣ (55), ಬೈಲಪ್ಪ (45), ರಾಮಣ್ಣ (50), ಕಾರು ಚಾಲಕ ಮಹಮ್ಮದ್ ರಫೀಕ್ ಗುಡ್ನಾಳ (25) ಎಂದು ಗುರುತಿಸಲಾಗಿದೆ.

ಮೃತರೆಲ್ಲರೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದವರಾಗಿದ್ದಾರೆ. ಹುಲಿಗೆಮ್ಮನ ದರ್ಶನ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಹುನಗುಂದ ಮೂಲಕ ಮುದ್ದೇಬಿಹಾಳಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button