ಪ್ರಗತಿವಾಹಿನಿ ಸುದ್ದಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.
ಮುಡಾ ಹಗರಣಕ್ಕೆ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಇದರ ಬೆನಲ್ಲೇ ವಿಪಕ್ಷ ಬಿಜೆಪಿನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಟ್ತು ಹಿಡಿದಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾದಾಳಿ ನಡೆಸಿದರು.
ಪ್ರತಿಭಟನೆ ಮುಂದಿನ ಭಾಗವಾಗಿ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ವಿಧಾನಸೌಧ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ಬಿಜೆಪಿ ನಾಯಕರನ್ನು ತಡೆದಿದ್ದಾರೆ. ಶಾಸಕ ಬೆಲ್ಲದ್ ನೇತೃತ್ವದಲ್ಲಿ ಮತ್ತೊಂದು ಗುಂಪು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಯಿತು. ಈ ವೇಳೆ ಪೊಲೀಸರು ಶಾಸಕ ಬೆಲ್ಲದ್, ಆರ್.ಅಶೋಕ್, ಸಿ.ಟಿ.ರವಿ, ಸುನೀಲ್ ಕುಮಾರ್, ಅಶ್ವತ್ಥ ನಾರಾಯಣ, ಅರಗ ಜ್ಞಾನೇಂದ್ರ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ತುಂಬಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ