Belagavi NewsBelgaum NewsKannada NewsKarnataka NewsNationalPolitics

*ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ವಿಜೃಂಭಣೆಯಿಂದ ಆಚರಣೆಗೆ ಡಿಸಿ ಮೊಹಮ್ಮದ್ ರೋಷನ್ ಸೂಚನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಿಸಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ (ಸೆ.25) ಜರುಗಿದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ಟೋಬರ್ 17 ರಂದು ಜರುಗಲಿರುವ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ವ ಕ್ರಮಗಳನ್ನು ಕೈಗೊಳ್ಳಲಾಗುವದು. ಸಂಗೋಳ್ಳಿ ರಾಯಣ್ಣನೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಮರಣ ದಂಡನೆ ಹಾಗೂ ಜೀವಾವದಿ ಶಿಕ್ಷೆಗೆ ಒಳಗಾದ ಸಮುದಾಯದ ನಾಯಕರ ಹೆಸರುಗಳನ್ನು ಕಾರ್ಯಕ್ರಮದ ವೇದಿಕೆಗೆ ಇಡಲು ತಿಳಿಸಿದರು.

ಕಾರ್ಯಕ್ರಮದ ಕುರಿತು ಮುದ್ರಿಸಲಾಗುವ ಆಮಂತ್ರಣ ಪತ್ರಿಕೆಗಳನ್ನು ಶಿಚ್ಚಾಚಾರದ ಪ್ರಕಾರ ಮುದ್ರಿಸಿ ಗಣ್ಯರುಗಳಿಗೆ ಸಾಕಷ್ಟು ಮುಂಚಿತವಾಗಿ ತಲುಪಿಸುವ ಕಾರ್ಯವಾಗಬೇಕು. ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿ ಅವರ ಜೀವನ ಸಂದೇಶಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಅಂತಿಮಗೊಳಿಸಲು ಸೂಚಿಸಿದರು.

ಕಾರ್ಯಕ್ರಮದ ದಿನದಂದು ಕೋಟೆ ಕೆರೆಯಿಂದ ಕುಮಾರ ಗಂಧರ್ವ ರಂಗಮಂದಿರದ ವರೆಗೆ ಮೆರವಣಿಗೆ ಆಯೋಜಿಸಲು ತೀರ್ಮಾನಿಸಲಾಯಿತು. ಮೆರವಣಿಗೆಯಲ್ಲಿ ಜಾನಪದ ಕಲಾ ತಂಡಗಳು ಭಾಗವಹಿಸುವಂತೆ ಕ್ರಮ ಜರುಗಿಸಬೇಕು.

ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾನ್ವಿತ ವಿಧ್ಯಾರ್ಥಿಗಳಿಗೆ ವೇದಿಕೆಯಲ್ಲಿ ಸನ್ಮಾನಿಸಲು ತೀರ್ಮಾನಿಸಲಾಯಿತು. ತಾಲೂಕುಗಳಲ್ಲಿ ತಹಶೀಲ್ದಾರರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲು ನಿರ್ದೇಶನ ನೀಡಲಾಗುವದು ಎಂದರು.

ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಗಳಲ್ಲಿ ಕಡ್ಡಾಯವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಮವನ್ನು ಆಚರಿಸಿ ವರಿದ ಸಲ್ಲಿಸಲು ಸೂಚನೆ ನೀಡಲಾಗುವದು. ಅಲ್ಲದೇ ಈ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿ, ಸದಸ್ಯರುಗಳು ಭಾಗವಹಿಸುವಂತೆ ಸೂಚನೆ ನೀಡಲಾಗುವದು ಎಂದು ಜಿಲ್ಲಾಪಂಚಾಯತ ಸಿ.ಇ.ಓ ರಾಹುಲ ಶಿಂಧೆ ಅವರು ತಿಳಿಸಿದರು.

ಮೆರವಣಿಗೆಯಲ್ಲಿ ಕುಂಬಗಳೊಂದಿಗೆ ಪಾಲ್ಗೊಳ್ಳುವ ಕುರಿತು. ಕಾರ್ಯಕ್ರಮದ ನಗರದ ಪ್ರಮುಖ ಸ್ಥಳಗಳಲ್ಲಿ ಬ್ಯಾನರ ಅಳವಡಿಸಲು, ಸ್ವಾಗತ ಕಮಾನು ನಿರ್ಮಾಣ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಲಯದ ಅಧೀಕ್ಷಕ ರವೀಂದ್ರ ಗಡಾದಿ, ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ, ಬೆಳಗಾವಿ ಉಪ ವಿಭಾಗಾಧಿಕಾರಿ ಶ್ರವಣ ನಾಯಕ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ, ಪರಿಶಿಷ್ಟ ವರ್ಗದ ಸಮಾಜದ ಮುಖಂಡರುಗಳಾದ ಮಲ್ಲೇಶ ಚೌಗಲೆ, ಭಾವುಕಣ್ಣ ಬಂಗ್ಯಾಗೋಳ, ರಾಜು ತಳವಾರ, ಸುರೇಶ ಗವನ್ನವರ, ಮಹಾದೇವ ತಳವಾರ, ಬಸವರಾಜ ಆಯಟ್ಟಿ, ದುರ್ಗೇಶ ಮೇತ್ರಿ, ಕವಿತಾ ಕುಸನಾಳ ಸೇರಿದಂತೆ ಸಮಾಜದ ಗಣ್ಯರು, ಪ್ರಮುಖರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button