ಪ್ರಗತಿವಾಹಿನಿ ಸುದ್ದಿ: ಸ್ವಾಮೀಜಿಯೊಬ್ಬರಿಗೆ ಬ್ಲ್ಯಾಕ್ ಮಾಡಿದ ಆರೋಪದಲ್ಲಿ ಮಹಿಳೆಯನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ತಿಪಟೂರಿನ ಮಠವೊಂದರಲ್ಲಿ ಸ್ವಾಮೀಜಿಗೆ ಅಶ್ಲೀಲ ವಿಡಿಯೋ, ಫೋಟೋಗಳನ್ನು ಮುಂದಿಟ್ಟು 6 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟು ಬ್ಲ್ಯಾಕ್ ಮಾಡುತ್ತಿದ್ದ ಪ್ರಕರಣದಲ್ಲಿ ಮಹಿಳೆಯನ್ನು ಬಂಧಿಸಲಾಗಿದೆ.
ಸ್ವಾಮೀಜಿ ದೂರು ಆಧರಿಸಿ ಸಿಸಿಬಿ ಪೊಲೀಸರು ಆರೋಪಿ ಮಹಿಳೆ ಬಂಧಿಸಿದ್ದಾರೆ. ವಿದ್ಯಾ ಬಿರಾದಾರ ಪಾಟೀಲ್ ಬಂಧಿತ ಮಹಿಳೆ. ಬಂಧಿತ ಮಹಿಳೆಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ ವೇಳೆ ಕೋರ್ಟ್ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ವಿಜಯಪುರ ಮೂಲದ ವಿದ್ಯಾ ತನ್ನನ್ನು ಕರ್ನಾಟಕ ಮಾಹಿತಿ ಹಕ್ಕು ಆಯೋಗದ ಅಧ್ಯಕ್ಷೆ, ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಸಹೋದರಿ ಎಂದು ಹೇಳಿ ವಂಚಿಸಲು ಯತ್ನಿಸಿದ್ದಳು. ಸದ್ಯ ಆರೋಪಿ ಮಹಿಳೆಯನ್ನು ಕಸ್ಟಡಿಗೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ