ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೊಬ್ಬ ತನ್ನ ನಾಲ್ವರು ಪುತ್ರಿಯರೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ರಂಗಪುರಿ ಪ್ರದೇಶದಲ್ಲಿ ಘಟನೆ ನಡೆದಿದೆ.
ಮನೆಯೊಳಗಿಂದ ದುರ್ವಾಸನೆ ಬರುತ್ತಿದ್ದಂತೆ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಮೃತರು ರಂಗಪುರಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಎಲ್ಲರೂ ಮೂಲತಃ ಬಿಹಾರದ ಛಪ್ರಾ ಜಿಲ್ಲೆಯ ನಿವಾಸಿಗಳಾಗಿದ್ದಾರೆ. ತಂದೆ ನಾಲ್ವರು ವಿಕಲಚೇತನ ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮಕ್ಕಳ ತಾಯಿ ಈಗಾಗಲೇ ಕ್ಯಾನ್ಸರ್‌ನಿಂದ ಸಾವನ್ನಪ್ಪಿದ್ದರು. ಶುಕ್ರವಾರ ತಡರಾತ್ರಿ ಪೊಲೀಸರು ಮನೆಯ ಬೀಗ ಒಡೆದು ಎಲ್ಲಾ ಶವಗಳನ್ನು ಹೊರತೆಗೆದಿದ್ದಾರೆ. ಹೆಣ್ಣು ಮಕ್ಕಳನ್ನು ಪೋಷಿಸಲಾಗದ ಕಾರಣ ತಂದೆ ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸರು ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ವಿವರವನ್ನು ಕಲೆ ಹಾಕುತ್ತಿದ್ದಾರೆ. ಎರಡು ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ವ್ಯಕ್ತಿ ಮೂರ್ನಾಲ್ಕು ದಿನಗಳಿಂದ ಜನರ ಕಣ್ಣಿಗೆ ಕಂಡಿರಲಿಲ್ಲ. ಹಾಗಾಗಿ ಆತನ ಸಹೋದರನಿಗೆ ಮಾಹಿತಿ ನೀಡಲಾಗಿತ್ತು. ಘಟನಾ ಸ್ಥಳದಲ್ಲಿ ಪೊಲೀಸರಿಗೆ ಯಾವುದೇ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ. ಘಟನೆಯ ನಂತರ ಸ್ಥಳೀಯ ಪೊಲೀಸರೊಂದಿಗೆ ವಿಧಿವಿಜ್ಞಾನ ತಂಡ ಸ್ಥಳ ಪರಿಶೀಲನೆ ನಡೆಸುತ್ತಿದೆ. ಎಲ್ಲಾ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ