
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.
ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಬಾಂಬ್ ಇಡಲಾಗಿದೆ ಎಂದು ಹೋಟೆಲ್ ಸಿಬ್ಬಂದಿಗೆ ಇ-ಮೇಲ್ ಕಳುಹಿಸಲಾಗಿದ್ದು, ಹೋಟೆಲ್ ಸಿಬ್ಬಂದಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ರಾಜಕಾರಣಿಗಳು, ಕ್ರಿಕೆಟ್ ಆಟಗಾರರು, ಬೃಹತ್ ಉದ್ಯಮಿಗಳು ವಾಸ್ತವ್ಯ ಹೂಡುತ್ತಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ