Karnataka News

*ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದೆ. ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಬೆಳಗಾವಿ, ಗದಗ, ಹಾವೇರಿ, ಧಾರವಾಡ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

Home add -Advt

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಲ ಮಳೆಯಾಗಲಿದೆ.


Related Articles

Back to top button